Site icon Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜನತಾ ಪ್ರೇರಣಾ 2024 – ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಬ್ಯಾಂಕಿಂಗ್, ಅಗ್ನಿವೀರ್, ಬಾಲ ನ್ಯಾಯ ಕಾಯ್ದೆಗಳು ಹಾಗೂ ನಾಟಾ  ವಿಷಯದ ಕುರಿತಾಗಿ ಮಾಹಿತಿ ಕಾರ್ಯಾಗಾರ ಹೆಮ್ಮಾಡಿಯ ಜಯಶ್ರೀ ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಬ್ಯಾಂಕ್ ಶಿರೂರಿನ  ವ್ಯವಸ್ಥಾಪಕರಾದ  ರಾಧೇಶ್ ಕಾಮತ್  ಅವರು ಸ್ಪರ್ಧಾತ್ಮಕ ಯುಗದಲ್ಲಿ ಇಂತಹ ಮಾಹಿತಿ ಕಾರ್ಯಾಗಾರಗಳು ಉಪಯುಕ್ತವಾಗಿವೆ, ಸ್ಪರ್ಧಾತ್ಮಕತೆಗೆ ಅನುಗುಣವಾಗಿ ಹೆಜ್ಜೆ ಹಾಕಿ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ಪದವಿಪೂರ್ವ ಶಿಕ್ಷಣ ಪರಿಪೂರ್ಣವಾಗಬೇಕಾದರೆ ಜ್ಞಾನಾತ್ಮಕವಾದ ಎಲ್ಲಾ ವಿಚಾರಗಳನ್ನು ಸ್ವೀಕರಿಸಿ ಅದರಂತೆ ಕಾಲೇಜಿನಲ್ಲಿ ವಿನೂತನ ಯೋಜನೆಗಳನ್ನು ಆಯೋಜಿಸಿದ್ದೇವೆ ಅವುಗಳ ಬಳಕೆ ನಿಮ್ಮದಾಗಲಿ ಎಂದರು‌.

ಬ್ಯಾಂಕಿಂಗ್  ಕುರಿತು ಕರ್ನಾಟಕ ಬ್ಯಾಂಕ್ ಕುಂದಾಪುರ ಶಾಖೆಯ ಅಧಿಕಾರಿ ಉದಯ ಹೆಗ್ಡೆ ಅವರು ಮಾಹಿತಿಯ ನೀಡಿ ಬ್ಯಾಂಕಿಂಗ್ ವ್ಯವಹಾರದೊಂದಿಗೆ ಬ್ಯಾಂಕಿಂಗ್ ಉದ್ಯೋಗಕ್ಕೆ ಸಂಬಂಧಿಸಿದ  ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು.

ಅಗ್ನಿವೀರ್ ಕುರಿತು ಮಾಹಿತಿ ನೀಡಿದ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಎಮ್.ಕೆ. ಶೆಟ್ಟಿ ಅವರು ಮಾತನಾಡಿ ಅಗ್ನಿವೀರ್ ಕುರಿತು ಸಂಪೂರ್ಣವಾಗಿ ಮಾಹಿತಿ ನೀಡಿದರು.

ಬಾಲ ನ್ಯಾಯ ಕಾಯ್ದೆಗಳ ಕುರಿತು ಮಾಹಿತಿ ನೀಡಿದ ಮಕ್ಕಳ ರಕ್ಷಣಾ ಘಟಕ ಉಡುಪಿಯ ರಕ್ಷಣಾಧಿಕಾರಿಯಾಗಿರುವ ಮಹೇಶ ದೇವಾಡಿಗ ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳ ಕುರಿತಾಗಿ ಸಂಪೂರ್ಣವಾಗಿ ಮಾಹಿತಿ ನೀಡಿದರು.

ನಾಟಾ ಸ್ಪರ್ಧಾತ್ಮಕ ಪರೀಕ್ಷೆಯ ಕುರಿತು ಸಹ-ಸಂಸ್ಥಾಪಕರು ಮತ್ತು ಆಪರೇಷನಲ್ ಹೆಡ್ ಡಿಸೈನ್ ವೆನ್ಯೂ ಚಂದ್ರಶೇಖರ್ ಬೆಂಗಳೂರು ನಾಟಾ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಕಾಲೇಜಿನ‌ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version