Kundapra.com ಕುಂದಾಪ್ರ ಡಾಟ್ ಕಾಂ

‌ಉಡುಪಿ: ತೋಟಗಾರಿಕೆ ಬೆಳೆ ಬೆಳೆಯಲು ಸಹಾಯಧನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಅಡಿಕೆ, ತೆಂಗು, ಗೇರು, ಅಂಗಾಂಶ ಬಾಳೆ, ಕಾಳುಮೆಣಸು, ಕೋಕೋ, ಹಲಸು, ಜಾಯಿಕಾಯಿ, ರಾಮ್ ಬೂತಾನ್, ಡ್ರ್ಯಾಗನ್ ಪ್ರೂಟ್ ಮತ್ತು ಮಲ್ಲಿಗೆ ಪ್ರದೇಶ ವಿಸ್ತರಣೆ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

ಕೃಷಿ ಜಮೀನು ಹಾಗೂ ಉದ್ಯೋಗ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲೆಮಾರಿ ಜನಾಂಗ, ಬುಡಕಟ್ಟು ಜನಾಂಗ, ಬಡತನ ರೇಖೆಗಿಂತ ಕಡಿಮೆ ಇರುವ ಕುಟುಂಬ, ಸ್ತ್ರೀ ಪ್ರಧಾನ ಕುಟುಂಬ, ವಿಕಲ ಚೇತನ ಪ್ರಧಾನ ಕುಟುಂಬ, ಭೂ ಸುಧಾರಣಾ ಫಲಾನುಭವಿಗಳು, ಇಂದಿರಾ ಆವಾಜ್ ಯೋಜನೆ ಫಲಾನುಭವಿಗಳು, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯ ವಾಸಿಗಳು ಹಾಗೂ ಸಣ್ಣ ಮತ್ತು ಅತೀ ಸಣ್ಣ ರೈತರು ಸದರಿ ಯೋಜನೆಯಡಿ ಮಾರ್ಗಸೂಚಿಯಂತೆ ಹೊಸ ತೋಟಗಳನ್ನು ನಿರ್ಮಾಣ ಮಾಡಿ, ಕೂಲಿ ಹಾಗೂ ಸಾಮಾಗ್ರಿ ವೆಚ್ಚವನ್ನು ಸಹಾಯಧನದ ರೂಪದಲ್ಲಿ ಪಡೆಯಬಹುದಾಗಿರುತ್ತದೆ.

ಆಸಕ್ತ ರೈತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತ್ ಅಥವಾ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version