ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರ್ಕಾರವು ಗರ್ಭಿಣಿ ಹಾಗೂ ಬಾಣಂತಿ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಪ್ರಯೋಜನವು ಮೊದಲ ಎರಡು ಜೀವಂತ ಮಕ್ಕಳಿಗೆ ಲಭ್ಯವಾಗಲಿದ್ದು, ಎರಡನೇ ಮಗುವು ಹೆಣ್ಣು ಮಗುವಾಗಿರಬೇಕು.
ಮೊದಲ ಮಗುವಿಗೆ ಎರಡು ಕಂತುಗಳಲ್ಲಿ 5,000 ರೂ. ಹಾಗೂ ಎರಡನೇ ಮಗು ಹೆಣ್ಣು ಮಗುವಾದಲ್ಲಿ 6,000 ರೂ. ಗಳನ್ನು ಜನನದ ನಂತರ ಒಂದೇ ಕಂತಿನಲ್ಲಿ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಯ ಖಾತೆಗೆ ವರ್ಗಾಯಿಸಲಾಗುವುದು.
ಈ ಯೋಜನೆಯ ನೊಂದಾವಣೆಗೆ ಸಮೀಪದ ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಕಳ, ಕುಂದಾಪುರ, ಉಡುಪಿ ಹಾಗೂ ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

