Kundapra.com ಕುಂದಾಪ್ರ ಡಾಟ್ ಕಾಂ

ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ  

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇವರ ಸಹಯೋಗದೊಂದಿಗೆ, ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇಲ್ಲಿ ನಡೆದ ಕುಂದಾಪುರ  ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ – ಬಾಲಕಿಯರ  ಚೆಸ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ವಿದ್ಯಾರ್ಥಿಗಳಾದ  ಸಿಧ್ವಿಕ್ ಪೂಜಾರಿ ೭B , ಯು.ವಿಶ್ರುತ್ ಮೇಲಾಡಿ 7D, ಸಾತ್ವಿಕ್ ಪೂಜಾರಿ 8̧D ಹರಿದಾಸ್ ಆರ್.ಮಲ್ಯ 9E, ವರ್ಣಿತಾ ವಿ.ಕುಂದರ್ 9F, ಮೇಘನ ಪ್ರಕಾಶ್ ಶ್ಯಾನಭಾಗ್ 7E, ದೇವಿಕಾ ಶೆಣೈ 8F ಅವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು  ಅಭಿನಂದನೆ ಸಲ್ಲಿಸಿರುತ್ತಾರೆ.

Exit mobile version