Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್‌ಕಾರ್ಸ್ ಪಿ.ಯು ಕಾಲೇಜು: ಜಿಲ್ಲಾ ಮಟ್ಟದ ಶಟ್ಲ್ ಪಂದ್ಯಾಟ ಉದ್ಘಾಟನೆ

ಕುಂದಾಪುರ: ಇಂದಿನ ಕಾಲೇಜುಗಳಲ್ಲಿ ಕ್ರೀಡೆಗೆ ಬೇಕಾದ ಉತ್ತಮ ಸೌಲಭ್ಯಗಳು ದೊರೆಯುತ್ತಿದ್ದರೂ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಂಡು ಮುನ್ನಡೆಯಿರಿ ಎಂದು ಕರ್ನಾಟಕ ಬ್ಯಾಂಕ್‌ನ ನಿರ್ದೇಶಕರಾದ ಡಾ| ಹೆಚ್. ರಾಮ್‌ಮೋಹನ್ ಹೇಳಿದರು.

ಅವರು ಭಂಡಾರ್‌ಕಾರ್ಸ್ ಪಿ.ಯು ಕಾಲೇಜು ಕುಂದಾಪುರ ಮತ್ತು ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಪಿ.ಯು ವಿದ್ಯಾರ್ಥಿಗಳಿಗೆ ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಭಂಡಾರ್‌ಕಾರ್ಸ್ ಪಿ.ಯು. ಕಾಲೇಜು, ಎಸ್.ಪಿ. ತೋಳಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಮಣಿಪಾಲದ ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ| ಎಚ್. ಶಾಂತರಾಮ್ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು. ಕುಂದಾಪುರದ ಭಂಡಾರ್‌ಕಾರ್ಸ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಜಿ.ಎಮ್.ಗೊಂಡ, ಭಂಡಾರ್‌ಕಾರ್ಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶಂಕರನಾರಾಯಣ ಕೆ., ಹಳೆ ವಿದ್ಯಾರ್ಥಿ ಸಂಘದ ನಿಕಟಪೂರ್ವಾಧ್ಯಕ್ಷ ಮಡಾಮಕ್ಕಿ ಶಶಿಧರ ಶೆಟ್ಟಿ, ಪೂರ್ವಾಧ್ಯಕ್ಷ ರಾಘವೇಂದ್ರಚರಣ ನಾವಡ ಉಪಸ್ಥಿತರಿದ್ದರು. ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೆ. ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಂಜಿತ್‌ಕುಮಾರ್ ಶೆಟ್ಟಿ ವಂದಿಸಿದರು.

ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಆರ್.ಎನ್.ಶೆಟ್ಟಿ ಪಿಯು ಕಾಳೇಜು, ಮದರ್ ಥೆರೇಸಾ ಶಂಕರನಾರಾಯಣ, ಎಸ್.ಎಂ.ಎಸ್.ಪಿಯು ಕಾಳೇಜು ಬ್ರಹ್ಮಾವರ, ಭಂಡಾರ್‌ಕಾರ್ಸ್ ಕಾಲೇಜು ಕುಂದಾಪುರ, ಎಂ.ಜಿ.ಎಂ ಉಡುಪಿ ವಿದ್ಯಾರ್ಥಿಗಳು ಹಾಗೂ ಹುಡುಗಿಯರ ವಿಭಾಗದಲ್ಲಿ ಬ್ರಹ್ಮಾವರದ ಎಸ್‌ಎಂಎಸ್, ಉಡುಪಿಯ ಪೂರ್ಣ ಪ್ರಜ್ಞಾ ಕಾರ್ಕಳದ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.


News shuttle badmiton kundapura2

Exit mobile version