Site icon Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕರಾಗಿ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಯುವ ಬಂಟರ ಸಂಘದ ವತಿಯಿಂದ ಆಗಸ್ಟ್ 18 ರ ಭಾನುವಾರ ಯುವ ಮೆರಿಡಿನ್‍ನಲ್ಲಿ ನಡೆಯಲಿರುವ  ವಿದ್ಯಾರ್ಥಿ ವೇತನ ಸಮಿತಿಯ ಸಂಚಾಲಕರಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರೂ, ಸಾಹಿತ್ತಿಕ ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಪ್ರಕರ ವಾಗ್ಮಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಆಯ್ಕೆಯಾಗಿದ್ದಾರೆ.

ಸಂಘದ ಗೌರವಾಧ್ಯಕ್ಷರಾದ ಬಿ. ಉದಯ್ ಕುಮಾರ್ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version