Kundapra.com ಕುಂದಾಪ್ರ ಡಾಟ್ ಕಾಂ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿಧ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬೈಂದೂರು ವಲಯ ಮಟ್ಟದ ಯೋಗಾಸನ ಸ್ಪರ್ಧೆ14 ರ ವಯೋಮಾನದ ಹುಡುಗಿಯರ ರಿದಮಿಕ್ ಯೋಗ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿಧ್ಯಾರ್ಥಿನಿ ಸಾನಿಧ್ಯ ಎಸ್. ಮೊಗವೀರ  6ನೇ ತರಗತಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

14 ರ ವಯೋಮಾನದ ಹುಡುಗರ ರಿದಮಿಕ್ ಯೋಗ ವಿಭಾಗದಲ್ಲಿ ವಂಶಿತ್ 6ನೇ ತರಗತಿ ದ್ವಿತೀಯ ಸ್ಥಾನ ಗಳಿಸಿರುತ್ತಾನೆ.

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನಲ್ಲಿ ಮಕ್ಕಳ ಸರ್ವತೋಮುಕ ಬೆಳವಣಿಗೆಗೆ ಪೂರಕವಾಗುವಂತಹ ವೈವಿಧ್ಯಮಯ ತರಬೇತಿಗಳನ್ನು ನೀಡುತ್ತಾ, ಶೈಕ್ಷಣಿಕವಾಗಿ ಪ್ರಗತಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಧಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version