Site icon Kundapra.com ಕುಂದಾಪ್ರ ಡಾಟ್ ಕಾಂ

ಮುಂಗಾರು ಭತ್ತದ ಬೆಳೆಗೆ ರೈತರಿಗೆ ಕೃಷಿ ಪ್ರಶಸ್ತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಮುಂಗಾರು ಭತ್ತದ ಬೆಳೆಗೆ ರೈತರು ಹಾಗೂ ರೈತ ಮಹಿಳೆಯರಿಂದ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿದ್ದು, ಸಿಟಿಝನ್ ಲಾಗಿನ್ ಅಥವಾ ಆರ್.ಎಸ್.ಕೆ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸೇವಾ ಕೇಂದ್ರದಲ್ಲಿ ಆಸಕ್ತ ರೈತ ಹಾಗೂ ರೈತ ಮಹಿಳೆಯರು ಪ್ರತ್ಯೇಕವಾಗಿ ಆಗಸ್ಟ್ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version