Kundapra.com ಕುಂದಾಪ್ರ ಡಾಟ್ ಕಾಂ

ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ವಯೋಶ್ರೇಷ್ಠರಿಗೆ ರಾಜ್ಯ ಪ್ರಶಸ್ತಿ ನೀಡಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಹಿರಿಯ ನಾಗರಿಕರ ವಿವಿಧ ಕ್ಷೇತ್ರಗಳಾದ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.

ಜಿಲ್ಲೆಯ ಹಿರಿಯ ನಾಗರಿಕರು ಈ ಬಗ್ಗೆ ತಮ್ಮ ಪ್ರಸ್ತಾವನೆಗಳನ್ನು ಕನ್ನಡ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಮೂನೆ 1 ಮತ್ತು ನಮೂನೆ 2 ರಲ್ಲಿ ಭರ್ತಿ ಮಾಡಿ ಆಗಸ್ಟ್ 31 ರ ಒಳಗಾಗಿ ಸಲ್ಲಿಸಬಹುದಾಗಿದೆ.     

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dwdsc.karnataka.gov.in ಅಥವಾ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ : 0820-2574810, 2574811 ಅನ್ನು ಸಂರ್ಪಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version