Site icon Kundapra.com ಕುಂದಾಪ್ರ ಡಾಟ್ ಕಾಂ

ಎಕ್ಸಲೆಂಟ್ ಪಿ. ಯು.ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ, ಕುಂದಾಪುರದಲ್ಲಿ ವನಮಹೋತ್ಸವ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಎಕ್ಸಲೆಂಟ್ ಪಿ. ಯು ಕಾಲೇಜು ಮತ್ತು ಹೈಸ್ಕೂಲ್ ಸುಣ್ಣಾರಿ, ಕುಂದಾಪುರ, ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಹಾಗೂ ರೋಟರಿ ಕ್ಲಬ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮ ನೆರೆವೇರಿತು. .

ಸಂಸ್ಥೆಯ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟ ನಂತರದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ. ಎಂ. ಹೆಗ್ಡೆ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ರಿ. ಕುಂದಾಪುರ ಇದರ ಅಧ್ಯಕ್ಷರಾದ ಎಂ. ಮಹೇಶ್ ಹೆಗ್ಡೆ ವಹಿಸಿದ್ದರು .

ಪ್ರಕಾಶ್‌ಚಂದ್ರ ಶೆಟ್ಟಿ ಚಿತ್ತೂರು, ಮಾಜಿ ಅಧ್ಯಕ್ಷರು ರೋಟರಿ ಕ್ಲಬ್ ಕುಂದಾಪುರ ಅವರು ತಮ್ಮ ಪ್ರಾಸ್ತಾವಿಕ  ನುಡಿಯಲ್ಲಿ ರೋಟರಿ ಕ್ಲಬ್‌ ಬೆಳೆದು ಬಂದ ಹಾದಿ ಹಾಗೂ ಅದರ ಧ್ಯೇಯೋದ್ದೇಶಗಳನ್ನು ತಿಳಿಯಪಡಿಸಿದರು.

ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಲಿಯಾಕತ್ ಅಲಿ, ಅಧ್ಯಕ್ಷರು ರೋಟರಿ ಕ್ಲಬ್ ಕುಂದಾಪುರ ಅವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು. ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ಸಲಹೆ ನೀಡಿದರು.

ನಂತರ ಮಾತನಾಡಿದ ಕುಂದಾಪುರದ ತೋಟಗಾರಿಕೆಯ ಇಲಾಖೆಯ ಟೆಕ್ನಿಕಲ್ ಆಫೀಸರ್ ಸಂತೋಷ್ ಹುಲ್ಲೂರ್ ನೆಮ್ಮದಿಯ ಜೀವನಕ್ಕೆ ಗಿಡ-ಮರಗಳ ಮಹತ್ವವನ್ನು ತಿಳಿಯಪಡಿಸುತ್ತಾಅವುಗಳ ಬಗ್ಗೆ ಕಾಳಜಿವಹಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವೆಂಕಟೇಶ ನಾವುಂದ ವಲಯ ಸೇನಾನಿ, ರೋಟರಿ ಕ್ಲಬ್ ಕುಂದಾಪುರ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಎಕ್ಸಲೆಂಟ್ ಪ. ಪೂ ಕಾಲೇಜು ಸುಣ್ಣಾರಿ ಸರೋಜಿನಿ ಆಚಾರ್ಯ ಮುಖ್ಯೋಪಾಧ್ಯಾಯರು ಎಕ್ಸಲೆಂಟ್ ಪ್ರೌಢಶಾಲೆ ಕುಂದಾಪುರ-ಅವರು ಉಪಸ್ಥಿತರಿದ್ದರು.

ಎಕ್ಸಲೆಂಟ್ ಪ್ರೌಢಶಾಲಾ ಶಿಕ್ಷಕ ಸಂದೀಪ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು .

Exit mobile version