Kundapra.com ಕುಂದಾಪ್ರ ಡಾಟ್ ಕಾಂ

ಹೆಮ್ಮಾಡಿ: ಜನತಾ ಪ. ಪೂ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ ‌78ನೇ ಸ್ವಾತಂತ್ರ್ಯ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ವಿ.ವಿ.ವಿ.ಮಂಡಳಿ ರಿ. ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರು ಧ್ವಜಾರೋಹಣಗೈದು, ದೇಶ ಬಿಡುಗಡೆಗಾಗಿ ಹೋರಾಟಗೈದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ,  ರಾಷ್ಟ್ರೀಯ ಮನೋಭಾವನೆಯನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಗಣೇಶ ಮೊಗವೀರ ಅವರು ಉಪಸ್ಥಿತರಿದ್ದು, ದೇಶಕ್ಕಾಗಿ ಹೋರಾಡುವ ಯೋಧರು, ಅನ್ನ ನೀಡುವ ರೈತ ಇವರು ನಮ್ಮ ದೇಶದ ರಿಯಲ್ ಹಿರೋಗಳೆಂದರು. ಸ್ವಾತಂತ್ರ್ಯ ಸಂಗ್ರಾಮದ ಯಶೋಗಾತೆಯನ್ನು ಸ್ಮರಿಸಿದರು.

ಸಮಾರಂಭದಲ್ಲಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ, ಕಾಲೇಜಿನ ಉಪ-ಪ್ರಾಂಶುಪಾಲರಾದ ರಮೇಶ ಪೂಜಾರಿ, ಕಾಲೇಜಿನ ಹಾಗೂ ಪ್ರೌಢಶಾಲೆಯ ಬೋಧಕ/ಬೋಧಕೇತರ ವೃಂದದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ ಸ್ವಾಗತಿಸಿ, ವಂದಿಸಿದರು.

Exit mobile version