Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜಾಕೋಬ್ ಡಿಸೋಜಾ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.17:
ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಕಾಂಗ್ರಸ್ ಮುಖಂಡ ಜಾಕೋಬ್ ಡಿಸೋಜಾರವರು ಇಂದು ಬೆಳಿಗ್ಗೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ನಗರದ ಸಂಗಮ್ ಬಳಿಯ ನಿವಾಸಿಯಾದ ಜಾಕೋಬ್ ಅವರು, ಕಾಂಗ್ರೇಸ್ನ ತಳಮಟ್ಟದ ಕಾರ್ಯಕರ್ತರಾಗಿ ಕುಂದಾಪುರ ನಗರದ ಪುರಸಭಾ ಸದಸ್ಯರಾಗಿ, ಕುಂದಾಪುರ ಪುರಸಭೆಯ ಉಪಾಧ್ಯಕ್ಷರಾಗಿ ಹಾಗೂ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಪುತ್ರ, ಪುತ್ರಿ ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ

Exit mobile version