Site icon Kundapra.com ಕುಂದಾಪ್ರ ಡಾಟ್ ಕಾಂ

ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ಅವಧಿ ವಿಸ್ತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಬೆಳೆ ಸಾಲ ಹೊಂದಿರುವ ರೈತರನ್ನು ಸಂಪೂರ್ಣ ಬೆಳೆ ವಿಮೆ ಯೋಜನೆಗೆ ಒಳಪಡಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬೆಳೆ ಸಾಲ ಹೊಂದಿದ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ಆಗಸ್ಟ್ 25 ರ ವರೆಗೆ  ಅವಧಿ ವಿಸ್ತರಣೆ ಮಾಡಿ ಅವಕಾಶ ಕಲ್ಪಿಸಲಾಗಿದ್ದು.

ಬೆಳೆ ವಿಮೆಗೆ ಒಳಪಡದ ಬೆಳೆ ಸಾಲ ಹೊಂದಿರುವ ರೈತರು ಕೂಡಲೇ ತಮ್ಮ ಬೆಳೆ ಸಾಲ ಹೊಂದಿರುವ ಬ್ಯಾಂಕ್‌ನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version