Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಪ.ಪೂ ಕಾಲೇಜಿನ‌ ವಿದ್ಯಾರ್ಥಿನಿ ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ನಾರಾಯಣ ಗುರುಗಳ ತತ್ವ ಹಾಗೂ ಜೀವನ ಚರಿತ್ರೆ’ ಈ ವಿಷಯದ ಕುರಿತು ನಡೆದ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ.

ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version