Kundapra.com ಕುಂದಾಪ್ರ ಡಾಟ್ ಕಾಂ

ಆರೋಗ್ಯ ನಿಗಾ ಸಹಾಯಕರ ತರಬೇತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ (ಹೋಮ್ ನರ್ಸಿಂಗ್)  18 ರಿಂದ 30 ವರ್ಷದ ವರೆಗಿನ ವಯೋಮಿತಿಯ ಎಸ್. ಎಸ್. ಎಲ್. ಸಿ ಅಥವಾ ಪಿಯುಸಿ ಉತ್ತೀರ್ಣ/ ಅನುತ್ತೀರ್ಣ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭಾರತ ಸರಕಾರದ ಕೌಶಲ್ಯಾಭಿವೃದ್ಧಿ ಮಂತ್ರಾಲಯದ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮದ ಮಾನ್ಯತೆ ಪಡೆದ ಪಠ್ಯ ಕ್ರಮದಲ್ಲಿ ತರಬೇತಿ ನೀಡಲಾಗುವುದು. ಒಂದು ತಿಂಗಳ ತರಬೇತಿಯ ಅವಧಿಯಲ್ಲಿ ಊಟೋಪಚಾರ ಮತ್ತು ಅಗತ್ಯವಿರುವವರಿಗೆ ವಸತಿ ಸೌಲಭ್ಯ ಒದಗಿಸಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ಒದಗಿಸಲಾಗುವುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ, ದೂ.ಸಂಖ್ಯೆ: 0820 – 2532222 ಅಥವಾ ಕಾರ್ಯದರ್ಶಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ರೆಡ್‌ಕ್ರಾಸ್ ಭವನ, ಅಜ್ಜರಕಾಡು ಉಡುಪಿ ಮೊ. 8310311448 ಅಥವಾ 9741762007 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರೆಡ್‌ಕ್ರಾಸ್ ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version