Site icon Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿವೇತನ: ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯ ಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಎಸ್.ಎಸ್.ಪಿ ತಂತ್ರಾಂಶದಲ್ಲಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರ ಪದವಿವರೆಗಿನ ವಿಕಲಚೇತನ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://ssp.postmatric.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version