Kundapra.com ಕುಂದಾಪ್ರ ಡಾಟ್ ಕಾಂ

ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು: ಡಾ. ನರೇಂದ್ರ ರೈ ದೇರ್ಲ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ ಸಂಕುಲ ಆರೋಗ್ಯ ಪೂರ್ಣ ಜೀವನವನ್ನು ನಡೆಸಲು ಸಾಧ್ಯ ಎಂಬುದಾಗಿ ಡಾ. ನರೇಂದ್ರ ರೈ ದೇರ್ಲ ಹೇಳಿದರು.

ಅವರು ” ಒಂದು ಬೊಗಸೆ ಹಸಿರು” ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ  ನಡೆದ ಕ್ರಿಯೇಟಿವ್ ಸ್ಫೂರ್ತಿ ಮಾತು 6 ನೇ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು, ಬೋಧಕ ವರ್ಗದವರು, ವಸತಿ ನಿಲಯ ಪಾಲಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕನ್ನಡ ಭಾಷಾ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Exit mobile version