Kundapra.com ಕುಂದಾಪ್ರ ಡಾಟ್ ಕಾಂ

ನಾವುಂದ: ಬೆಂಕಿ ತಗುಲಿ ಫ್ಯಾನ್ಸಿ – ಬಟ್ಟೆ ಅಂಗಡಿ ಸುಟ್ಟು ಕರಕಲು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.23:
ನಾವುಂದ ಗ್ರಾಮದ ಪಾಲ್ಮ್ ಗ್ರೋವ್   ಕಾಂಪ್ಲೆಕ್ಸ್ ನಲ್ಲಿದ್ದ ಶ್ರೀ ವಿನಾಯಕ ಟೈಲರ್, ಬಟ್ಟೆ ಹಾಗೂ ಸ್ಟೇಶನರಿ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಸಂಪೂರ್ಣ ಸುಟ್ಟು ಹೋದ ಘಟನೆ ಮಧ್ಯಾಹ್ನ ನಡೆದಿದೆ.

ನಾವುಂದದ ಪ್ರತಿಭಾ ವಿಜೇಂದ್ರ ಅರೆಹೊಳೆ ಎಂಬವವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು.

ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ಐಟಂಗಳು, ಹಾಗೂ ಕೌಂಟರ್‌ನಲ್ಲಿ ಸುಮಾರು 5000 ನಗದು ಇಡಲಾಗಿತ್ತು. ಅಂಗಡಿ ಮಾಲಕಿ ಪ್ರತಿಭಾ ವಿಜೇಂದ್ರ ಅವರು ಮಧ್ಯಾಹ್ನ 12.00ರವರೆಗೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ನಂತರ ದೇವಸ್ಥಾನಕ್ಕೆ ತೆರಳಿದ್ದರು. ಸುಮಾರು 12.45ರ ಹೊತ್ತಿಗೆ ಹೊಗೆ ತುಂಬಿಕೊಂಡದ್ದನ್ನು ಆಸುಪಾಸಿನ ಅಂಗಡಿಯವರು ಹಾಗೂ ಸ್ಥಳೀಯರು ನೋಡಿ ಅಗ್ನಿಶಾಮಕ ಹಾಗೂ ಪೋಲೀಸರಿಗೆ ಫೋನ್ ಮಾಡಿದ್ದರು. ಅಗ್ನಿ ಶಾಮಕದವರು ಆಗಮಿಸಿ ಬೆಂಕಿ ನಂದಿಸುವ ಹೊತ್ತಿಗೆ ಸಂಪೂರ್ಣ ಸುಟ್ಟು ಹೋಗಿದ್ದು ಅಂದಾಜು 3 ಲಕ್ಷಕ್ಕೂ ಮಿಕ್ಕಿ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ.

ಅಗ್ನಿಶಾಮಕದಳದ ಸಿಬ್ವಂದಿಗಳು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಬೈಂದೂರು ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Exit mobile version