Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ತಾಯಂದಿರ ಕೈತುತ್ತು ಕಾರ್ಯಕ್ರಮ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿ ಇವರ ಆಶ್ರಯದಲ್ಲಿ ಪಿಎಂ ಪೋಷಣ್ ಅಭಿಯಾನ್ ಕಾರ್ಯಕ್ರಮದಡಿಯಲ್ಲಿ ತಾಯಂದಿರ ಕೈತುತ್ತು ಕಾರ್ಯಕ್ರಮವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಎಸ್‌ಡಿಎಂಸಿ ಅಧ್ಯಕ್ಷೆ ಶೋಭಾ ಖಾರ್ವಿ, ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ತಾಂಡೇಲ, ದಾಕುಹಿತ್ಲು ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್, ಎಸ್‌ಡಿಎಂಸಿ ಸದಸ್ಯರು, ರೋಟರಿ ಸದಸ್ಯರು, ಪೋಷಕರು ಮೊದಲಾದವರು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ವತಿಯಿಂದ ಲಕ್ಕಿ ಮದರ್ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ 45 ತಾಯಂದಿರು ತಮ್ಮ ಮಕ್ಕಳಿಗೆ ಇಷ್ಟವಾದ ವಿಶಿಷ್ಟ ತಿನಿಸುಗಳನ್ನು ತಯಾರಿಸಿ ತಂದು ತಮ್ಮ ಮಕ್ಕಳಿಗೆ ಕೈಯರೆ ಉಣಬಡಿಸಿದರು.

Exit mobile version