Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಮಧುಮೇಹ ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.         
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇವರ ಸಹಯೋಗದೊಂದಿಗೆ ಮಧುಮೇಹ ಅರಿವು ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಿಗ್ ಮೆಡಿಕಲ್ ಸೆಂಟರ್ ಉಡುಪಿ ಸಿಟಿ ಇಲ್ಲಿನ ವೈದ್ಯರಾದ ಡಾ| ಶ್ರುತಿ ಬಲ್ಲಾಳ್ ಕಾರ್ಯಕ್ರಮವನ್ನು ಉದ್ದೇಶಿಸಿ ಇತಿ-ಮಿತಿ ಆಹಾರ ಪದ್ಧತಿ ಹಾಗೂ ದೈನಂದಿನ ವ್ಯಾಯಾಮದ ಬದುಕು ಆರೋಗ್ಯವನ್ನು ಸುಸ್ಥಿರದಲ್ಲಿಡುವುದಲ್ಲದೆ, ಮಧುಮೇಹದಂತಹ ಖಾಯಿಲೆ ಬಾರದಂತೆ ತಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇದರ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಚಿಕ್ಕ ವಯಸ್ಸಿನಲ್ಲೇ ಆರೋಗ್ಯದ ಬಗ್ಗೆ ಸಕಲ ಅರಿವು ಅವಶ್ಯಕ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ  ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಕ್ಷಣಕ್ಕೆ ಉತ್ತಮ ಜೀವನಶೈಲಿ ಅತ್ಯವಶ್ಯಕ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು. ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿದರು,  ಉಡುಪಿ ಜಿಲ್ಲಾ ನಿವೃತ್ತ ಆರೋಗ್ಯ ಮೇಲ್ವಿಚಾರಣಾಧಿಕಾರಿ ಎ. ಮುತ್ತಯ್ಯ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳನ್ನು ಸಭೆಗೆ ಪರಿಚಯಿಸಿದರು, ಯುವ ರೆಡ್ ಕ್ರಾಸ್‌ನ ಸಹ ಸಂಯೋಜಕಿ ಮಾಲತಿ ಕುಂದರ್ ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ವೇತಾ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಬಿ. ಕಾಂ. ವಿದ್ಯಾರ್ಥಿನಿಗಳಾದ ಕಾವ್ಯ ಹಾಗೂ ಪ್ರಜಕ್ತ ಪ್ರಾರ್ಥಿಸಿದರು.

Exit mobile version