Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸಂಪನ್ನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಗುಜ್ಜಾಡಿ ಗ್ರಾಮದ ಕೊಡಪಾಡಿಯ ಮಾರಿಕಾಂಬಾ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತ್ರಾಸಿಯ ಅಂಬೇಡ್ಕರ್ ಭವನದಲ್ಲಿ ಇತ್ತೀಚಿಗೆ ಜರಗಿತು.

ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಸಕ್ತ ಸಾಲಿನ ಲಾಭಾಂಶದಲ್ಲಿ ಸದಸ್ಯರಿಗೆ ಶೇ.5 ಡಿವಿಡೆಂಡ್ ನೀಡಲು ನಿರ್ಧರಿಸಲಾಯಿತು. ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೀಪಾ ಅವರು ಸರಕಾರದಿಂದ ಮಹಿಳಾ ಸದಸ್ಯರಿಗೆ ಸಿಗುವ ಹೊಸ ಯೋಜನೆಗಳ ಮಾಹಿತಿ ನೀಡಿದರು.

ಸಂಘದ ನಿರ್ದೇಶಕರಾದ ವಿಜಯಾ ಬಿ., ಸುರೇಖಾ ಕಾನೋಜಿ, ಮಹಾಲಕ್ಷ್ಮೀ, ರೇಖಾ ಖಾರ್ವಿ, ಶಾಂತ, ಶಾಂತಿ ಖಾರ್ವಿ, ಸುನೀತಾ ಪೂಜಾರಿ, ರೇಣುಕಾ, ಶ್ಯಾಮಲಾದೇವಿ, ಲಲಿತಾ ಖಾರ್ವಿ, ಶಾಂತಾ ಮರಾಠಿ ನಾಯ್ಕ್ ಉಪಸ್ಥಿತರಿದ್ದರು.

ಸಂಘದ ಸಿಬ್ಬಂದಿ ಶ್ರೀಲವಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವಾಮಿಲಿಂಗೇಶ್ವರ್ ಅವರು 2023-24ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಭಾಸ್ಕರ ಗಾಣಿಗ ಕಾರ್ಯಕ್ರಮ ನಿರ್ವಹಿಸಿದರು. ಉಪಾಧ್ಯಕ್ಷೆ ರತ್ನ ಟಿ. ದೇವಾಡಿಗ ವಂದಿಸಿದರು.

Exit mobile version