Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಹನ್ನೆರಡನೇ ವರ್ಷದ ಮುದ್ದು ಕೃಷ್ಣ ಸ್ಪರ್ಧೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಡಾ. ಬಿ. ಆರ್. ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್‌ ಗಂಗೊಳ್ಳಿ ಮತ್ತು ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 12ನೇ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಮೇಲ್‌ ಗಂಗೊಳ್ಳಿಯ ಡಾ.ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.

ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ನಿರ್ದೇಶಕಿ ಯಾಮಿನಿ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಮಾಜಿ ಅಧ್ಯಕ್ಷೆ ಸವಿತಾ ಯು. ದೇವಾಡಿಗ ಶುಭಾಶಂಸನೆಗೈದರು. ನಿವೃತ್ತ ಶಿಕ್ಷಕ ಪ್ರೇಮಾನಂದ ಕೆ. ಬಹುಮಾನ ವಿತರಿಸಿದರು. ಶಿಕ್ಷಕಿಯರಾದ ಆಶಾ ಮತ್ತು ಜ್ಯೋತಿ ಹಾಗೂ ಸವಿತಾ ಉಮಾನಾಥ ದೇವಾಡಿಗ ತೀರ್ಪುಗಾರರಾಗಿ ಸಹಕರಿಸಿದರು.

ಯುವಕ ಮಂಡಲದ ಅಧ್ಯಕ್ಷ ನಾಗೇಶ ಸ್ವಾಗತಿಸಿದರು. ಯುವತಿ ಮಂಡಲದ ಕಾರ್ಯದರ್ಶಿ ಸರಸ್ವತಿ ಕಾರ್ಯಕ್ರಮ ನಿರ್ವಹಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ಭಾಸ್ಕರ ಎಚ್.ಜಿ. ವಂದಿಸಿದರು.

Exit mobile version