Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿಯ ಎಸ್. ವಿ. ಹಿ. ಪ್ರಾ ಶಾಲೆ: ಕುಂದಾಪುರ ವೃತ್ತ ಮಟ್ಟದ ಖೋ-ಖೋ ಪಂದ್ಯಾಟದ ಉದ್ಘಾಟನೆ

oplus_2

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ವಿದ್ಯಾರ್ಥಿಗಳು ಸೋಲು ಗೆಲವನ್ನು ಸಮಾನವಾಗಿ ಸ್ವೀಕರಿಸಬೇಕು. ಸೋತವರು ಕುಗ್ಗದೆ, ಆತ್ಮಸ್ಥೈರ್ಯವನ್ನು ಹೆಚ್ಚಿಸಿಕೊಂಡು ಗೆಲುವಿಗಾಗಿ ಶ್ರಮಿಸಬೇಕು. ಹೆಚ್ಚೆಚ್ಚು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಕೆ.ರಾಮನಾಥ ನಾಯಕ್ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಎಸ್.ವಿ. ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ಕುಂದಾಪುರ ವೃತ್ತ ಮಟ್ಟದ ಖೋ-ಖೋ ಪಂದ್ಯಾಟವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯ ಮುಖ್ಯ ಶಿಕ್ಷಕ ಜಿ. ವಿಶ್ವನಾಥ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ರಕ್ಷಕ-ಶಿಕ್ಷಕ ಸಮಿತಿ ಕಾರ್ಯದರ್ಶಿ ಅಜಿತ್ ಭಟ್, ರಕ್ಷಕ-ಶಿಕ್ಷಕ ಸಮಿತಿ ಸದಸ್ಯರು, ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹ ಶಿಕ್ಷಕಿಯರಾದ ಮಾಲಾಶ್ರೀ ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮೀ ಖಾರ್ವಿ ವಂದಿಸಿದರು.

Exit mobile version