Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: “ಆತ್ಮವಿಶ್ವಾಸದಿಂದ ಇಂಗ್ಲೀಷ್ ಕಲಿಯಿರಿ” ವಿಶೇಷ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಜಾಗತೀಕರಣದ ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಭಾಷೆಯಾಗಿ ಮನ್ನಣೆ ಪಡೆದ ಇಂಗ್ಲೀಷ್ ಭಾಷೆಯ ಹಿಡಿತ ಅನಿವಾರ್ಯ. ಅದರಲ್ಲಿಯೂ ಪದವಿ ಶಿಕ್ಷಣದ ಸಂದರ್ಭದಲ್ಲಿ ಭಾಷಾ ಕೌಶಲ್ಯವನ್ನು ಬೆಳೆಸಿಕೊಂಡಾಗ ಮಾತ್ರ ಮುಂದಿನ ದಿನಗಳಲ್ಲಿ ಸರ್ವತೋಮುಖ ಯಶಸ್ಸು ಸಾಧ್ಯ ಎಂದು ಉಡುಪಿಯ ಎಮ್.ಜಿ.ಎಮ್. ಸಂಧ್ಯಾ ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಯಾಸಿನ್ ಮನ್ನಾ ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ವಿಭಾಗವು ಆಯೋಜಿಸಿದ “ಆತ್ಮವಿಶ್ವಾಸದಿಂದ ಇಂಗ್ಲೀಷ್ ಕಲಿಯಿರಿ”ವಿಶೇಷ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಇಂಗ್ಲೀಷ್ ಭಾಷೆಯ ಅರಿವಿನ ಅನಿವಾರ್ಯತೆಯನ್ನು ತಿಳಿಸಿದರು.

ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರವಿನಾ ಸಿ. ಪೂಜಾರಿ ಅತಿಥಿಗಳನ್ನು ಪರಿಚಯಿಸಿ, ಸ್ವಾತಿ ಜಿ. ರಾವ್ ವಂದಿಸಿ, ಸ್ಟಾಲಿನ್ ಡಿಸೋಜಾ ನಿರೂಪಿಸಿದರು.

Exit mobile version