Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಕಾರ್ಯಕ್ರಮದ ಉದ್ಘಾಟನೆ

oplus_2

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇದೆ. ಪ್ರತಿಭೆಯನ್ನು ಹೊರಹೊಮ್ಮಿಸಲು ಸಿಗುವ ಅವಕಾಶಗಳನ್ನು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಳ್ಳಬೇಕು. ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಮೂಲಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸಿದ್ದು, ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸುವಂತಾಗಬೇಕು ಎಂದು ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸಿಸ್ಟರ್ ಡಯಾನಾ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಸ್ಟೆಲ್ಲಾ ಮಾರೀಸ್ ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2024-25 ಉದ್ಘಾಟಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿದ್ದ ಬಿಆರ್‌ಪಿ ಮಿಲ್ಟನ್ ಕ್ರಾಸ್ತಾ, ಸಿಆರ್‌ಪಿ ಪ್ರದೀಪ ಕುಮಾರ್ ಶೆಟ್ಟಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬಿ. ರಾಘವೇಂದ್ರ ಪೈ ಮತ್ತು ಜಯಂತಿ ಖಾರ್ವಿ ಮತ್ತು ಸಾಮಾಜಿಕ ಕಾರ್ಯಕರ್ತೆ ತಿಲೋತ್ತಮ ನಾಯಕ್ ಶುಭಾಶಂಸನೆಗೈದರು. ಸ್ಟೆಲ್ಲಾ ಮಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಡೊರೇನ್ ಉಪಸ್ಥಿತರಿದ್ದರು.

ಸ್ಟೆಲ್ಲಾ ಮಾರೀಸ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕ್ರೆಸೆನ್ಸ್ ಸ್ವಾಗತಿಸಿದರು. ಬಿಆರ್‌ಪಿ ಸಂತೋಷ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನೂಜಾಡಿ ಶಾಲೆಯ ಮುಖ್ಯೋಪಾಧ್ಯಾಯ ರಾಜೇಶ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಶಾಂತಿ ವಂದಿಸಿದರು.

Exit mobile version