Site icon Kundapra.com ಕುಂದಾಪ್ರ ಡಾಟ್ ಕಾಂ

ಕೆರಾಡಿ: ಚೆಸ್ ಸ್ಪರ್ಧೆಯಲ್ಲಿ ಸಂಜನಾ ವಿ. ಹೆಚ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಹಯೋಗದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ. ಯು. ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಂಜನಾ ವಿ. ಹೆಚ್ 4ನೇ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅವರನ್ನು ಆಡಳಿತ ಮಂಡಳಿ ಅವರು , ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅವರು ಅಭಿನಂದಿಸಿದರು.

Exit mobile version