Site icon Kundapra.com ಕುಂದಾಪ್ರ ಡಾಟ್ ಕಾಂ

ತಲ್ಲೂರು ಉದಯ ಕುಮಾರ್ ಅವರಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗೌರವ

oplus_2

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಗಂಗೊಳ್ಳಿ:
ಸರಳ ಸಜ್ಜನಿಕೆಯನ್ನು ಮೈಗೂಡಿಸಿಕೊಂಡು ನೊಂದವರ ಧ್ವನಿಯಾಗಿ ನಿಸ್ವಾರ್ಥವಾಗಿ ಸಮಾಜ ಸೇವೆ ಮಾಡುತ್ತಿರುವ ನೇರ ನಡೆ ನುಡಿಯ ಉದಯ ಕುಮಾರ್ ತಲ್ಲೂರು ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿ ಅವರನ್ನು ಗೌರವಿಸಿರುವುದು ಅವರ ಸಾಮಾಜಿಕ ಸೇವೆಗೆ ಸಂದ ಗೌರವ ಹಾಗೂ ಇಡೀ ಸಮುದಾಯಕ್ಕೆ ನೀಡಿದ ಗೌರವವಾಗಿದೆ ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ ಹೇಳಿದರು.

ಅಮೆರಿಕಾದ ಏಷ್ಯಾ ಅಂತರಾಷ್ಟ್ರೀಯ ಸಾಂಸ್ಕೃತಿಕ ಸಂಶೋಧನಾ ವಿಶ್ವ ವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ ಉದಯ ಕುಮಾರ್ ತಲ್ಲೂರು ಅವರನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗೌರವಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಶಶಿಕಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಮಾಜಿ ಸದಸ್ಯ ಬಿ. ರಾಘವೇಂದ್ರ ಪೈ ಶುಭ ಹಾರೈಸಿದರು. ಗ್ರಾಪಂ ಮಾಜಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಮಾಜಿ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಮಾಜಿ ಸದಸ್ಯೆ ಶಾಂತಿ ಖಾರ್ವಿ, ಗ್ರಾಪಂ ಸಿಬ್ಬಂದಿಗಳು, ಸಂಜೀವಿನಿ ಸಂಘದ ಸದಸ್ಯರು, ಮೊದಲಾದವರು ಉಪಸ್ಥಿತರಿದ್ದರು.

ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version