Kundapra.com ಕುಂದಾಪ್ರ ಡಾಟ್ ಕಾಂ

ಬೆಂಗಳೂರಿನಲ್ಲಿ ಇಂಜಿನಿಯರಿಂಗ್‌ ವ್ಯಾಸಂಗ ಮಾಡಲು ಇಷ್ಟವಿಲ್ಲದೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪಿಯುಸಿ ಬಳಿಕದ ವ್ಯಾಸಂಗಕ್ಕಾಗಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ದೊರೆತ ಬಗ್ಗೆ ಬೇಸರಗೊಂಡ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪರ ತಾಲೂಕಿನ ಹಳ್ನಾಡು ಎಂಬಲ್ಲಿ ನಡೆದಿದೆ. ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಶೆಟ್ಟಿ ಎಂಬುವರ ಮಗ ಸುಪ್ರಜ್ ಶೆಟ್ಟಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಕುಂದಾಪುರದ ಆಂಗ್ಲಮಾಧ್ಯಮ ಶಾಲೆಯಲ್ಲಿ ಪಿಯು ವಿದ್ಯಾಭ್ಯಾಸ ಮಾಡಿದ್ದ ಸುಪ್ರಜ್ ಶೆಟ್ಟಿಗೆ ಕೌಸಿಲಿಂಗ್‌ನಲ್ಲಿ ಇಂಜಿನಿಯರಿಂಗ್‌ ಸೀಟು ದೊರೆತಿತ್ತು. ಬೆಂಗಳೂರಿನಲ್ಲಿ ಇಂಜಿನಿಯರ್ ಮಾಡಲು ಆತನಿಗೆ ಇಷ್ಟವಿರಲಿಲ್ಲ.. ಆತನ ಮನೆಯವರು ಮಗನಿಗೆ ಬುದ್ಧಿವಾದ ಹೇಳಿ ಬೆಂಗಳೂರಿಗೆ ಕಳುಹಿಸಲು ಬಟ್ಟೆಬರೆಗಳನ್ನು ಪ್ಯಾಕ್ ಮಾಡಿದ್ದರು ಎನ್ನಲಾಗಿದೆ. ಗುರುವಾರ ಆತ ಬೆಂಗಳೂರಿಗೆ ಹೊರಡಬೇಕಿತ್ತು. ಆದರೆ ಬುಧವಾರ ಸಂಜೆ ಹಳ್ನಾಡು ಮನೆಯ ಸಮೀಪದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬುಧಚಾರ ಸಂಜೆ ಹೊಳೆಯ ಬದಿಯಲ್ಲಿ ಬದಿಯಲ್ಲಿ ತನ್ನ ಚಪ್ಪಲಿ ಮತ್ತು ಮೊಬೈಲ್ ಬಿಟ್ಟಿರುವುದು ಕಂಡು ಬಂದಿದೆ. ಇದರಿಂದ ಅನುಮಾನಗೊಂಡ ಮನೆಯವರು ಹಾಗೂ ಸ್ಥಳೀಯತು ಹುಡುಕಾಟ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಗುರುವಾರ ಮಧ್ಯಾಹ್ನ ಬಾಲಕನ ಮೃತದೇಹ ಅದೇ ಹೊಳೆಯಲ್ಲಿ ಪತ್ತೆಯಾಗಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ

Exit mobile version