Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಬೆಳೆ ಹಾನಿಯಾದ ರೈತರ ಮಾಹಿತಿ ಪ್ರಕಟ – ಆಕ್ಷೇಪಣೆ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಸರಕಾರದ ಆದೇಶದಂತೆ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಾದ ಪ್ರವಾಹ  ಹಾಗೂ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿಗೆ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆ ಹಾನಿಯಾದ ರೈತರ ಮಾಹಿತಿಯನ್ನು ಜಿಲ್ಲಾಧಿಕಾರಿಗಳ  ಕಚೇರಿ, ಉಪವಿಭಾಗಾಧಿಕಾರಿಗಳ  ಕಚೇರಿ, ತಹಶೀಲ್ದಾರ್‌ಗಳ ಕಚೇರಿ, ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

ಈ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಸಂಬಂಧಿಸಿದ ತಹಶೀಲ್ದಾರ್ ಕಛೇರಿ,  ಕೃಷಿ ಅಥವಾ ತೋಟಗಾರಿಕೆ ಇಲಾಖೆಗಳಲ್ಲಿ 07 ದಿನದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version