Kundapra.com ಕುಂದಾಪ್ರ ಡಾಟ್ ಕಾಂ

ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ವೀಕ್ಷಣಾಧಿಕಾರಿ ನಿಧನ. ಆತ್ಮಹತ್ಯೆ ಶಂಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಕುಂದಾಪುರದ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ನಡೆದಿದೆ . ಮೃತ ವ್ಯಕ್ತಿಯನ್ನು ಪ್ರಶಾಂತ್ ಕುಮಾರ (42) ಎಂದು ಗುರುತಿಸಲಾಗಿದೆ.

ಮನೆಯಿಂದ ಕೆಲಸಕ್ಕೆ ಹೋಗಿಬರುವುದಾಗಿ ಹೇಳಿ ತೆರಳಿದ್ದ ಪ್ರಶಾಂತ್‌, ಗುರುವಾರ ಕುಂದಾಪುರದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು. ಅನಾರೋಗ್ಯದ ಸಮಸ್ಯೆಯಿಂದ ಹೃದಯಾಘಾತ ಅಥವಾ ಇನ್ಯಾವುದೋ ಖಾಯಿಲೆಯಿಂದಾಗಿ ಲಾಡ್ಜ್‌ನಲ್ಲಿ ಮಲಗಿದ ಸ್ಥಿತಿಯಲ್ಲಿಯೇ ಮೃತಪಟ್ಟಿರುವುದು ತಿಳಿದುಬಂದಿದೆ.

ಶಿವಮೊಗ್ಗ ಮೂಲದ ಪ್ರಶಾಂತ್‌ ಕೊರ್ಗಿ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಿಕೊಂಡಿದ್ದು, ಇತ್ತಿಚಿಗೆ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದರು. ವಿಪರೀತ ಕುಡಿತದ ಚಟ ಹೊಂದಿದ್ದು, ಅಧಿಕ ರಕ್ತದ ಒತ್ತಡ ಖಾಯಿಲೆ ಹಾಗೂ ಮಾನಸಿಕ ಖಾಯಿಲೆ ಬಗ್ಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. ಸ್ನೇಹಿತರು ಆತನಿಗೆ ಬುದ್ಧಿ ಹೇಳಿ ಸಮಾಧಾನಿಸುತ್ತಿದ್ದರು. ಮದ್ಯ ಸೇವನೆಯ ವೇಳೆ ವಿಷಪದಾರ್ಥ ಸೇವಿಸಿರುವ ಬಗ್ಗೆ ಶಂಕೆ ಇದ್ದು, ತನಿಕೆ ನಡೆಸಲಾಗುತ್ತಿದೆ.

ಪ್ರಶಾಂತ್ ವಿವಾಹಿತನಾಗಿದ್ದು ಮಡದಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Exit mobile version