Site icon Kundapra.com ಕುಂದಾಪ್ರ ಡಾಟ್ ಕಾಂ

ವಂದೇ ಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಶೇ.12 ಡಿವಿಡೆಂಡ್ ಘೋಷಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
1984-85ನೇ ಸಾಲಿನ ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜು ಹಳೇ ವಿದ್ಯಾರ್ಥಿಗಳು ಸ್ಥಾಪಿಸಿದ ವಂದೇ ಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 14ನೇ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆದು, ಸದಸ್ಯರಿಗೆ ಶೇ.12 ಡಿವಿಡೆಂಡ್ ಘೋಷಣೆ ಮಾಡಲಾಯಿತು.

ವಂದೇ ಮಾತರಂ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಾಜಗೋಪಾಲ ಎಮ್. ಅಧ್ಯಕ್ಷತೆ ವಹಿಸಿ, ಸಂಘ ಉತ್ತಮ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದ್ದು, 4.40 ಕೋಟಿ ರೂ. ಠೇವಣಿ ಸಂಗ್ರಹಿಸಲಾಗಿದೆ ಎಂದು ಹೇಳಿದರು.

ಸಂಘದ ನಿರ್ದೇಶಕರಾದ ದಿನೇಶ ನಾವಡ, ರಘುರಾಮ್ ಶೆಟ್ಟಿ ಸಿ., ಶಾಂತಿ ಕಾಮತ್ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ನಾಗರಾಜ ಶೇರೆಗಾರ್ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಪುತ್ರನ್ ವರದಿ ಹಾಗೂ ಆಯವ್ಯಯ ಮಂಡಿಸಿದರು. ನಿರ್ದೇಶಕ ಮಂಜುನಾಥ ಗಾಣಿಗ ಕಾರ್ಯಕ್ರಮ ನಿರೂಪಿಸಿದರು. ಸ್ಥಾಪಕಾಧ್ಯಕ್ಷ ವಿನಯ ಎ. ಪಾಸ್ ವಂದಿಸಿದರು.

Exit mobile version