Kundapra.com ಕುಂದಾಪ್ರ ಡಾಟ್ ಕಾಂ

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಬೋರ್ಡ್ ಹೈಸ್ಕೂಲು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕುಂದಾಪುರ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಪ್ರೌಢ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡವು ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಬಾಲಕಿಯರ ತಂಡವು ನೇರವಾಗಿ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದುಕೊಂಡಿತು

ವಿಜೇತ ತಂಡಗಳಿಗೆ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಕಿರಣ್ ಹೆಗ್ಡೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ತೋಟಯ್ಯ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಉಪಸ್ಥಿತರಿದ್ದರು.

Exit mobile version