Site icon Kundapra.com ಕುಂದಾಪ್ರ ಡಾಟ್ ಕಾಂ

ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಮೂಡುಬಿದಿರೆ:
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮೂಡುಬಿದಿರೆ ವಲಯ ಹಾಗೂ ಸರ್ಕಾರಿ ಪ್ರೌಢ ಶಾಲೆ, ಪಡುಕೊಣಾಜೆ ಇವರ ಸಹಯೋಗದಲ್ಲಿ ನಡೆದ ತಾಲ್ಲೂಕು ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 14 ಮತ್ತು 17 ವರ್ಷ ವಯೋಮಿತಿಯ ಬಾಲಕರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಮುಂದೆ ನಡೆಯುವ ಜಿಲ್ಲಾ ಮಟ್ಟದ ತ್ರೋಬಾಲ್ ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಆಯ್ಕೆಯಾದ 24 ಕ್ರೀಡಾಪಟುವಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version