Site icon Kundapra.com ಕುಂದಾಪ್ರ ಡಾಟ್ ಕಾಂ

ಸಂಬಂಧಿಯ ಜೀವ ಉಳಿಸಲು ಹೋಗಿ ಪ್ರಾಣತೆತ್ತ ಕೋಟೇಶ್ವರ ಮೂಲದ ಮಹಿಳೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ ಮಂಗಳೂರು ಕರಂಗಲ್ಪಾಡಿ ನಿವಾಸಿ, ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ ಅರ್ಚನಾ ಕಾಮತ್(33) ಮೃತ ದುದೈವಿ.

ಯಕೃತ್ತಿಗೆ(ಲಿವರ್) ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತನ್ನ ಯಕೃತ್ತನ್ನು ದಾನ ಮಾಡಿದ್ದರು.  ಈ ಚಿಕಿತ್ಸೆಗೆ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಸೊಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ಅರ್ಚನಾ ಮೂಲತಃ ಕೋಟೇಶ್ವರದವರಾಗಿದ್ದು ಮಂಗಳೂರಿನ ಚೇತನ್ ಕಾಮತ್ ಅವರನ್ನು ಮದುವೆಯಾಗಿದ್ದರು. ಮೃತದೇಹವನ್ನು ಕರಂಗಲ್ಪಾಡಿಯಯ ನಿವಾಸಕ್ಕೆ ತಂದು ವಿಧಿ ವಿಧಾನ ನೆರವೇರಿಸಿದ ಬಳಿಕ ಕೋಟೇಶ್ವರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್‌ ಸಕ್ರಿಯವಾಗಿದ್ದು ಗುರುತಿಸಿಕೊಂಡಿದ್ದರು. ಅವರ ಅಕಾಲಿಕ ನಿಧನದ ಸುದ್ದಿ ಇಡೀ ಸಮಾಜವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಸಂಬಂಧಿಕರು, ಆತ್ಮೀಯರು ಆಘಾತಕಾರಿ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ. ಮೃತರು ಪತಿ ಸಿಎ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ.

Exit mobile version