Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಶ್ರೀ ವಿಶ್ವಕರ್ಮ ಜಯಂತಿ ಪ್ರಯುಕ್ತ ಹೊರೆಕಾಣಿಕೆ ವಾಹನ ಜಾಥಾ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯವಿರುವ ಶ್ರೀ ಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಕೂಡುವಳಿಕೆ ವಿಶ್ವಕರ್ಮ ಸಮಾಜದ ಎಲ್ಲ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಸಮಾಜ ಬಾಂಧವರ ಸಹಕಾರದೊಂದಿಗೆ ಶ್ರೀ ವಿಶ್ವಕರ್ಮ ಜಯಂತಿ ಪ್ರಯುಕ್ತ ಹೊರೆಕಾಣಿಕೆ ಬೃಹತ್ ವಾಹನ ಜಾಥಾ ಬೈಂದೂರು ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಳಿ ಚಂದ್ರಯ್ಯ ಆಚಾರ್ಯ ಅವರು ಚಾಲನೆ ನೀಡಿದರು.

ವಿಶ್ವಕರ್ಮ ಭಾವಚಿತ್ರದ ಟ್ಯಾಬ್ಲೋ ಹೊರಟು ಬೈಂದೂರು ತಹಶೀಲ್ದಾರ್ ಕಛೇರಿಯಿಂದ ಬೈಂದೂರು ರಥಬೀದಿಯಲ್ಲಿ ಸಾಗಿ ಬಂದು ರಾಷ್ಟ್ರೀಯ ಹೆದ್ದಾರಿಯ ಮೂಲಕ ನಾಗೂರು ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ತನಕ ಹೊರೆಕಾಣಿಕೆ ವಾಹನ ಜಾಥಾ ನಡೆಯಿತು.

ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಎರಡನೇ ಮೊಕ್ತೇಸರ ಚಿತ್ತೂರು ಪ್ರಭಾಕರ ಆಚಾರ್ಯ, ಮೂರನೇ ಮೊಕ್ತೇಸರ ಆಲೂರು ಶ್ರೀಧರ್ ಆಚಾರ್ಯ, ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ತ್ರಾಸಿ ಸುಧಾಕರ್ ಆಚಾರ್ಯ, ವಿಶ್ವಕರ್ಮ ಯುವಕ ಸಂಘ ಅಧ್ಯಕ್ಷ ನಾಗರಾಜ್ ಆಚಾರ್ಯ ಬಂಕೇಶ್ವರ, ಗೌರವಾಧ್ಯಕ್ಷ ನಾಗೇಂದ್ರ ಆಚಾರ್ಯ ತೊಂಡೆಮಕ್ಕಿ, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ ಆಚಾರ್ಯ ನಾವುಂದ, ಆರೋಗ್ಯ ನಿಧಿ ಅಧ್ಯಕ್ಷ ದಿವಾಕರ ಆಚಾರ್ಯ ಮಾರಣಕಟ್ಟೆ, ಬೈಂದೂರು ವಿಶ್ವಕರ್ಮ ಸೇವಾ ಸಂಘದ ಅಧ್ಯಕ್ಷ ನಾರಾಯಣ ಆಚಾರ್ಯ ಮಾವುಡ ಹಾಗೂ ದೇವಸ್ಥಾನದ ಕೂಡುವಿಕೆಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು ವಾಹನ ಜಾಥಾದಲ್ಲಿ ಭಾಗವಹಿಸಿದ್ದರು.

Exit mobile version