Kundapra.com ಕುಂದಾಪ್ರ ಡಾಟ್ ಕಾಂ

ಬಿ. ಬಿ. ಹೆಗ್ಡೆ ಕಾಲೇಜು: ಫ್ರೆಶರ್ಸ್ ಡೇ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪದವಿ ಶಿಕ್ಷಣವು ವಿದ್ಯಾರ್ಥಿಗಳ ಬದುಕಿನ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಟಿಸಿಕೊಡಬೇಕು. ಆ ಮೂಲಕ ಪ್ರಜ್ಞಾವಂತ ನಾಗರಿಕರಾಗಿ ಸಮಾಜಮುಖಿಯಾಗಿ ಬದುಕು ರೂಪಿಸಿಕೊಳ್ಳಲು ಈ ಪದವಿಯೊಂದಿಗೆ ಪಡೆಯುವ ಇತರ ಚಟುವಟಿಕೆಗಳು ಪೂರಕ. ಹೀಗಾಗಿ ಪಠ್ಯಪೂರಕವಾದ ಅಂಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಿ ಎಂದು ಕುಂದಾಪುರದ ಎಲೆಕ್ಟ್ರಿಕಲ್ ಗುತ್ತಿಗೆದಾರರಾದ ಶ್ರೀ ಕೆ.ಆರ್. ನಾಯ್ಕ್ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿಗಳಿಗಾಗಿ ಹಿರಿಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ & ರೇಷ್ಮಾ ಶೆಟ್ಟಿ, ಕಾರ್ಯದರ್ಶಿ ವಿನಾಯಕ್ ಎನ್. ಅಡಿಗ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಪೂಜಾ & ಶ್ರೇಯಾ ಖಾರ್ವಿ ಪ್ರಾರ್ಥಿಸಿ, ಕೀತಿ ಕೆ. ಶೆಟ್ಟಿ ಸ್ವಾಗತಿಸಿ, ವೈಷ್ಣವಿ ಎಮ್.ಎಸ್. ಅತಿಥಿಗಳನ್ನು ಪರಿಚಯಿಸಿ, ಶ್ರೀನಾಭ್ ಉಪಾಧ್ಯಾ ವಂದಿಸಿ, ಎಸ್.ಕ್ಯೂ.ಎ.ಸಿ. ಸಂಯೋಜಕಿ ಶೃದ್ದಾ ಆರ್. ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Exit mobile version