Site icon Kundapra.com ಕುಂದಾಪ್ರ ಡಾಟ್ ಕಾಂ

ಬಿ.ಬಿ. ಹೆಗ್ಡೆ ಕಾಲೇಜು: ಯುವ ರೆಡ್‌ಕ್ರಾಸ್ ಘಟಕ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.                       
ಕುಂದಾಪುರ:
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುಟಿಕೆಗಳ ಉದ್ಘಾಟನ ಕಾರ್ಯಕ್ರಮ ಗುರುವಾರದಂದು ಕಾಲೇಜಿನ ಸಭಾಂಗಣದಲ್ಲಿ ಜರಗಿತು.

ಇಂಡಿಯನ್ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಷ್ಟಿçÃಯ ಹಾಗೂ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಗಳ ಕಾರ್ಯವೈಖರಿ ಕುರಿತು ಸಂಕ್ಷೀಪ್ತವಾಗಿ ವಿವರಿಸಿ, ಕಾಲೇಜಿನ ರೆಡ್‌ಕ್ರಾಸ್ ಘಟಕ ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಯುವ ರೆಡ್‌ಕ್ರಾಸ್ ಸಂಯೋಜನಾಧಿಕಾರಿಯಾದ ಸತ್ಯನಾರಾಯಣ್ ಪುರಾಣಿಕ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿದಿ ಬೋಧಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಸಮಾಜದ ಶ್ರೇಯೋಭಿವೃದ್ದಿಯಲ್ಲಿ ಯುವ ರೆಡ್‌ಕ್ರಾಸ್ ಘಟಕ ಬೇರೆ ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋಶಾಧಿಕಾರಿಯಾದ ಶಿವರಾಮ್ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿ, ಪ್ರಾಸ್ತಾವಿಸಿದರು. ಸಹ ಸಂಯೋಜಕಿಯಾದ ಮಾಲತಿ ವಂದಿಸಿದರು. ವಿದ್ಯಾರ್ಥಿನಿ ದೀಕ್ಷಾ ಮತ್ತು ತಂಡ ಪ್ರಾರ್ಥಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಹಾಸ್ ಜೆ.ಜಿ. ಕಾರ್ಯಕ್ರಮ ನಿರೂಪಿಸಿದರು.

Exit mobile version