ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯುವಕರ ಮಾನಸಿಕ ಸ್ಥಿರತೆ ಗಟ್ಟಿಗೊಳ್ಳ ಬೇಕಾದರೆ ಶಿಕ್ಷಣದ ಜೊತೆಗೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಕ್ರೀಡೆಯೂ ಅತ್ಯವಶ್ಯಕ ಎಂಬುದನ್ನು ಬಾಂಡ್ಯ ಎಜುಕೇಷನಲ್ ಟ್ರಸ್ಟ್ಇದರ ಜಂಟಿ ಆಡಳಿತ ನಿರ್ದೇಶಕರು ಕೆ.ಸುಭಾಶ್ಚಂದ್ರ ಶೆಟ್ಟಿ ತಿಳಿಸಿದರು.
ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ಹಾಗೂ ಗುರುಕುಲ ಪದವಿಪೂರ್ವ ಕಾಲೇಜು ವಕ್ವಾಡಿ, ಕೋಟೇಶ್ವರ ಇದರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರದಂದು ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪುಟ್ಬಾಲ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ, ಅವರು ಆಟಗಳಿಗೆ ಮೊದಲು ಕ್ರೀಡಾ ಮನೋಭಾವದ ಅವಶ್ಯಕತೆ ಇದೆ. ಮನಸ್ಸಿನ ಶಾಂತಿಗಾಗಿ ಕ್ರೀಡೆ ಬೇಕು ಕೇವಲ ಬಹುಮಾನ ಗೆಲ್ಲಲು ಅಲ್ಲ ಎಂಬುದಾಗಿ ತಿಳಿಸಿ ಆಗಮಿಸಿದ ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಾಂಡ್ಯ ಎಜುಕೇಷನಲ್ ಟ್ರಸ್ಟ ಇದರ ಜಂಟಿ ಆಡಳಿತ ನಿರ್ದೇಶಕಿ ಆಗಿರುವ ಅನುಪಮಾ ಎಸ್. ಶೆಟ್ಟಿ, ಉಡುಪಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇದರ ಗೌರವಾಧ್ಯಕ್ಷರು ಜೀವನ್ ಕುಮಾರ್ ಶೆಟ್ಟಿ, ಹಾಗೂ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಕುಂದಾಪುರ ತಾಲ್ಲೂಕು ಕ್ರೀಡಾ ಸಂಯೋಜಕರು ರಾಮ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕ್ರೀಡಾಳುಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಅವಿನಾಶ್ ಆಚಾರ್ಯ ಅತಿಥಿಗಳನ್ನು ಸ್ವಾಗತಿಸಿ, ಸಂಖ್ಯಾಶಾಸ್ತ್ರ ಉಪನ್ಯಾಸಕಿ ಪವಿತ್ರಾ ಶೆಟ್ಟಿ ವಂದಿಸಿ, ಕನ್ನಡ ಉಪನ್ಯಾಸಕ ನಾಗರಾಜ್ ಗುಲ್ವಾಡಿ ಕಾರ್ಯಕ್ರಮ ನಿರೂಪಿಸಿದರು.