Site icon Kundapra.com ಕುಂದಾಪ್ರ ಡಾಟ್ ಕಾಂ

ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್. ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸುವ ಮಹತ್ವದ ಸಂಸ್ಥೆ ಎನ್.ಎಸ್.ಎಸ್. ಈ ಘಟಕಗಳ ಮೂಲಕ ನಡೆಯುವ ವಿವಿಧ ಕ್ರಿಯಾ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಸಕ್ರಿಯವಾಗಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸತ್ಪçಜೆಗಳಾಗಲು ಸಾಧ್ಯ. ನಾಯಕತ್ವ ಗುಣಗಳೊಂದಿಗೆ ಬದುಕಿನ ಶಿಕ್ಷಣವನ್ನು ವಿದ್ಯಾರ್ಥಿಗಳು ಈ ಮೂಲಕ ಪಡೆದುಕೊಳ್ಳಬೇಕೆಂದು ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಸುಗುಣಾ ಆರ್.ಕೆ. ಹೇಳಿದರು.

ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಎನ್.ಎಸ್.ಎಸ್. ಘಟಕ 1 & 2ರ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನ ಕೌಶಲ್ಯಗಳನ್ನು ರೂಪಿಸಿಕೊಳ್ಳಲು ಎನ್.ಎಸ್.ಎಸ್. ಅತ್ಯುತ್ತಮ ವೇದಿಕೆ ಎಂದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಈ ಸಂದರ್ಭ ಎನ್.ಎಸ್.ಎಸ್. ಸ್ವಯಂ ಸೇವಕ ಪ್ರತಿನಿಧಿಗಳಾದ ನಿತೇಶ್ ಶೇಟ್, ಆಕಾಶ್ ಬಿ. ಶೆಟ್ಟಿ. ನಿರೀಕ್ಷಾ ಹಾಗೂ ಕೀರ್ತನಾ ಉಪಸ್ಥಿತರಿದ್ದರು.

ಎನ್.ಎಸ್.ಎಸ್. ಘಟಕ 2ರ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ವಂದಿಸಿದರು. ಎನ್.ಎಸ್.ಎಸ್. ಸ್ವಯಂಸೇವಕ ಶ್ರೀನಿಧಿ ಪೂಜಾರಿ ಅತಿಥಿಗಳನ್ನು ಪರಿಚಯಿಸಿ, ಸುಜಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.   

Exit mobile version