Kundapra.com ಕುಂದಾಪ್ರ ಡಾಟ್ ಕಾಂ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಂದ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ವೆಬ್‌ಸೈಟ್  https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮಣಿಪಾಲ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ನೆಲ ಮಹಡಿ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596,  ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version