ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗ, ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಹಾಗೂ ಗಂಗೊಳ್ಳಿ ವಲಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘ ಇವರ ಸಹಯೋಗದೊಂದಿಗೆ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ ವರ್ಷ- 2024 ಅಂಗವಾಗಿ ಗಂಗೊಳ್ಳಿ ವಲಯ ಅಂಗನವಾಡಿ ಮಕ್ಕಳ ಚಿಣ್ಣರ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಶ್ರೀ ಶಾರದೋತ್ಸವ ಸಮತಿ ಅಧ್ಯಕ್ಷ ಸತೀಶ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ, ಹಿರಿಯ ನಾಗರಿಕ ಬಿ.ಸದಾನಂದ ಶೆಣೈ, ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಉಮೇಶ್ ಟಿ.ಎಲ್., ಶಾಲೆಯ ಮುಖ್ಯ ಶಿಕ್ಷಕ ಜಿ.ವಿಶ್ವನಾಥ ಭಟ್, ಉಡುಪಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್, ತೀರ್ಪುಗಾರರಾದ ಮಹಾಬಲ ಆಚಾರ್ಯ, ನಟರಾಜ್ ಮೇಲ್‌ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಸುಮಿತ್ರಾ ಜಿ., ಸರೋಜ ಜಿ.ಟಿ., ಶ್ರೀಕಾಂತ ಎನ್., ಈಶ್ವರ ಜಿ., ನಟರಾಜ್ ಜಿ.ಎಂ., ಶಿವಾನಂದ ಜಿ.ಟಿ., ಅಂಗನವಾಡಿ ಕಾರ್ಯಕರ್ತೆಯರಾದ ರೇಖಾ ಖಾರ್ವಿ, ಶೋಭಾ ಕೆ.ಎಸ್., ಶೇಷಮ್ಮ, ಕಮಲ, ಸಹನಾ, ನಿಖಿತಾ ಭಂಡಾರಿ, ಸಂಗೀತಾ, ಗಂಗಾ ಮತ್ತಿತರರು ಉಪಸ್ಥಿತರಿದ್ದರು. ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಸುಮಿತ್ರಾ ಜಿ. ಸ್ವಾಗತಿಸಿದರು. ಫಿಲೋಮಿನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು. ರೇಖಾ ಖಾರ್ವಿ ವಂದಿಸಿದರು.