Kundapra.com ಕುಂದಾಪ್ರ ಡಾಟ್ ಕಾಂ

ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಗುರುಕುಲ  ಪದವಿ ಪೂರ್ವ ಕಾಲೇಜು ವಕ್ವಾಡಿ  ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು  ಮಟ್ಟದ ಪದವಿ ಪೂರ್ವ  ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಾದ, ಕೆ.ಶ್ರೀನಿತಾ ಎಸ್ ಕಾಮತ್, ಶ್ರೇಯಾ ಶೆಟ್ಟಿ, ದಿವ್ಯಶ್ರೀ, ಅಮೂಲ್ಯ, ವನಿ̧ಷಾ ಸಂಜನಾ, ಕುನಾಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Exit mobile version