Kundapra.com ಕುಂದಾಪ್ರ ಡಾಟ್ ಕಾಂ

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬಸ್ಸು ಡಿಕ್ಕಿ. ವ್ಯಕ್ತಿ ಸಾವು

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ  ಕಾರಿಗೆ ಬಸ್ಸು ಡಿಕ್ಕಿಯಾಗಿ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಭಟ್ಕಳದ ನಾಜೀರ್ ಎಂದು ಗುರುತಿಸಲಾಗಿದೆ.

ಕುಟುಂಬದವರೊಂದಿಗೆ ಮಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಸಮೀಪ ತಾಂತ್ರಿಕ ಕಾರಣದಿಂದ ಕಾರನ್ನು ನಿಲ್ಲಿಸಿ ಪರೀಕ್ಷಿಸಲಾಯಿತು. ನಂತರ ಅವರು ಕಾರಿಗೆ ಹತ್ತುವ ವೇಳೆ ಕುಂದಾಪುರದಿಂದ ಗಂಗೊಳ್ಳಿ ಕಡೆಗೆ ತೆರಳುತ್ತಿರುವ ಬಸ್ಸೊಂದು ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.ಕೂಡಲೇ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Exit mobile version