Site icon Kundapra.com ಕುಂದಾಪ್ರ ಡಾಟ್ ಕಾಂ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಮ್ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ  ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentServices ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಆಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version