ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2024-25 ಯೋಗಾಸನ ಆರ್ಟಿಸ್ಟಿಕ್ ವಿಭಾಗದಲ್ಲಿ ಯೋಗ ಪಟು ತನ್ವಿತಾ ವಿ. ದ್ವಿತೀಯ ಸ್ಥಾನ ಪಡೆದುಕೊಂಡು ಮುಂದೆ ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದಾಳೆ.