Site icon Kundapra.com ಕುಂದಾಪ್ರ ಡಾಟ್ ಕಾಂ

ಬಸ್‌ – ಪಿಕ್‌ಅಪ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ ಐವರಿಗೆ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೊಲ್ಲೂರು:
ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್ ಪಲ್ಟಿಯಾಗಿ ಐವರು ಗಾಯಗೊಂಡ ಘಟನೆ ಇಡೂರು ಕುಂಜ್ಞಾಡಿ ಸಮೀಪದ ಜನ್ನಾಲ್ ಎಂಬಲ್ಲಿ ಬಧವಾರ ಸಂಜೆ ನಡೆದಿದೆ.

ಕೊಲ್ಲೂರಿನಿಂದ ತೆರಳುತ್ತಿದ್ದ ಮೆಣಸು ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಕುಂದಾಪುರದಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿ ಜನ್ನಾಲ್‌ ಎಂಬಲ್ಲಿ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಪಿಕ್ ಆಫ್ ವಾಹನ ಚಾಲಕ ನಿರ್ವಾಹಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ರಾಘವೇಂದ್ರ (43) ವಾಸಿಂ (30) ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಎಂದು ಗುರುತಿಸಲಾಗಿದೆ.

ಗಾಯ ಗೊಂಡವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಅಪಘಾತದ ಪರಿಣಾಮ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version