Site icon Kundapra.com ಕುಂದಾಪ್ರ ಡಾಟ್ ಕಾಂ

ವಾಲಿಬಾಲ್: ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದರೆ:
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ ಆಗಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕಣಚೂರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಂದ್ಯಾಟ ನಡೆದಿದ್ದು, ಫೈನಲ್ ನಲ್ಲಿ ಮಂಗಳೂರಿನ ಕರಾವಳಿ ಫಾರ್ಮಸಿ ಕಾಲೇಜಿನ ವಿರುದ್ಧ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ  ಅಲೈಡ್ ಹೆಲ್ತ್ ಸೈನ್ಸಸ್ 2-0 ಅಂತರದಿಂದ ಗೆಲುವು ಸಾಧಿಸಿದೆ.

ಅತ್ಯುತ್ತಮ ಹೊಡೆತಗಾರ ಪ್ರಶಸ್ತಿಗೆ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನ ವಿದ್ಯಾರ್ಥಿ ರಕ್ಷಿತ್ ಎಸ್. ಕೆ ಭಾಜನರಾಗಿದ್ದಾರೆ .

ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಯಲಿರುವ ಅಂತರ ವಲಯ ಟೂರ್ನಿಗೆ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಅರ್ಹತೆಯನ್ನು ಪಡೆದಿದೆ.

Exit mobile version