Kundapra.com ಕುಂದಾಪ್ರ ಡಾಟ್ ಕಾಂ

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖಾ ವೆಬ್‌ಸೈಟ್ ಪರಿಶಿಷ್ಟ ಜಾತಿ SW.KAR.NIC.IN, ಪರಿಶಿಷ್ಟ ಪಂಗಡ: TW.KAR.NIC.IN ಅಥವಾ http://ssp.karnataka.gov.in ಲಿಂಕ್‌ಗೆ ಲಾಗಿನ್ ಆಗಿ ಸಂಪೂರ್ಣ ಮಾಹಿತಿಯನ್ನು ನೀಡಿ ಕಡ್ಡಾಯವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಹಾಗೂ ಓPಅI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version