Kundapra.com ಕುಂದಾಪ್ರ ಡಾಟ್ ಕಾಂ

ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ವಲಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಅಂಪಾರು ವೃತ್ತಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನದೊಂದಿಗೆ ವಲಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್, ರತ್ನಕುಮಾರ್ ಮತ್ತು ಪ್ರಿಯಾಂಕಾ ತರಬೇತಿ ನೀಡಿರುತ್ತಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿರುತ್ತಾರೆ.

Exit mobile version