Kundapra.com ಕುಂದಾಪ್ರ ಡಾಟ್ ಕಾಂ

ಗೃಹ ವ್ಯವಹಾರಗಳ ಸಂಸದೀಯ ಸಮಿತಿಗೆ ಸಂಸದ ಬಿ. ವೈ ರಾಘವೇಂದ್ರ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ ರಾಘವೇಂದ್ರ ಅವರನ್ನು ಕೇಂದ್ರ ಸರ್ಕಾರವು ಎರಡು ಪ್ರಮುಖ ಸಂಸದೀಯ ಸಂಸ್ಥೆಗಳಿಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿಗೆ ಮತ್ತು ಗೃಹ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ (DRSC) ನೇಮಕಗೊಳಿಸಿ ಆದೇಶ ಹೊರಡಿಸಿದೆ. ಈ ನೇಮಕಾತಿಗಳು ರಾಷ್ಟ್ರೀಯ ನೀತಿ ರಚನೆಯಲ್ಲಿ ಅವರಿಗೆ ಮಹತ್ವದ ಹೊಣೆ ವಹಿಸಲಾಗಿದೆ.

ಸಾರ್ವಜನಿಕ ಉದ್ಯಮಗಳ ಸಮಿತಿಯು ಸರ್ಕಾರಿ ಸ್ವಾಮ್ಯದ ಉದ್ಯಮಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತದೆ. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಆಂತರಿಕ ಭದ್ರತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸುತ್ತದೆ.  

ಈ ನೇಮಕ ಕುರಿತು ಸಂಸದರಾದ ಬಿ.ವೈ ರಾಘವೇಂದ್ರ ಅವರು ಸಂಸತ ವ್ಯಕ್ತ ಪಡಿಸಿದ್ದು,  ನರೇಂದ್ರ ಮೋದೀಜಿ ಅವರಿಗೆ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುತ್ತಾರೆ.

Exit mobile version